ಪ.ಜಾತಿ/ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ- ಅರ್ಜಿ ಆಹ್ವಾನ

ಉಡುಪಿ: ಉಡುಪಿ ತಾಲೂಕಿನ ವಿದ್ಯಾ ಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡದ (ನವೀನ ವಿದ್ಯಾರ್ಥಿಗಳು ಹಾಗೂ ಕಳೆದ ಸಾಲಿನಲ್ಲಿ ಅರ್ಜಿ ಹಾಕದೇ ಇದ್ದಲ್ಲಿ ಇರುವ ವಿದ್ಯಾರ್ಥಿಗಳು) ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮಂಜೂರು ಮಾಡಲು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಸಂಬಂಧಿಸಿದ ಶಾಲೆಗಳ ಮುಖ್ಯಸ್ಥರುಗಳು ವಿದ್ಯಾರ್ಥಿಗಳ ದಾಖಲೆಗಳೊಂದಿಗೆ ನೇರವಾಗಿ ಇಲಾಖೆಯ ವೆಬ್‍ಸೈಟ್ ಆನ್‍ಲೈನ್‍ನಲ್ಲಿ ಅರ್ಜಿಗಳನ್ನು ದಾಖಲಿಸಬೇಕು.

1 ರಿಂದ 8 ನೇ ತರಗತಿ ವಿದ್ಯಾರ್ಥಿಯ ಪೋಷಕರ ಕುಟುಂಬದ ವಾರ್ಷಿಕ ಆದಾಯ 6 ಲಕ್ಷ ರೂ. ಒಳಗಿರಬೇಕು. 9 ರಿಂದ 10 ನೇ ತರಗತಿ ವಿದ್ಯಾರ್ಥಿಯ ಪೋಷಕರ ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷ ರೂ. ಒಳಗಿರಬೇಕು.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು: ವಿದ್ಯಾರ್ಥಿಯ SಂಖಿS-Iಆ, ವಿದ್ಯಾರ್ಥಿಯ ಆಧಾರ್/ ಇ.ಐ.ಡಿ ಸಂಖ್ಯೆ ಹಾಗೂ ಆಧಾರ್/ ಇ.ಐ.ಡಿ.ಯಲ್ಲಿ ನಮೂದಿಸಿದ ಹೆಸರು, ಪೋಷಕರ ಆಧಾರ್/ ಇ.ಐ.ಡಿ ಸಂಖ್ಯೆ ಹಾಗೂ ಆಧಾರ್ ಇ.ಐ.ಡಿ.ಯಲ್ಲಿ ನಮೂದಿಸಿದ ಹೆಸರು, ವಿದ್ಯಾರ್ಥಿಯ ಹೆಸರಿನಲ್ಲಿರುವ ಬ್ಯಾಂಕ್ ಖಾತೆಯ ವಿವರಗಳು(ಬ್ಯಾಂಕ್ ಹೆಸರು, ಬ್ಯಾಂಕ್ ವಿಳಾಸ, ಐ.ಎಫ್.ಎಸ್.ಸಿ. ಕೋಡ್, ಖಾತೆ ಸಂಖ್ಯೆ), ವಿದ್ಯಾರ್ಥಿಯ ಹೆಸರಿನಲ್ಲಿ ನೀಡಲಾದ ಗಣಕೀಕೃತ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳ ಆರ್.ಡಿ ಸಂಖ್ಯೆಗಳು. ವಿದ್ಯಾರ್ಥಿಯ ಹೆಸರಿನಲ್ಲಿರುವ ಬ್ಯಾಂಕ್ ಖಾತೆಗೆ ವಿದ್ಯಾರ್ಥಿಯ ಆಧಾರ್ ಸಂಖ್ಯೆ ಸೀಡಿಂಗ್ ಮಾಡುವುದು ಕಡ್ಡಾಯವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ; 0820-2528884 ಅನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.