ಉಡುಪಿ: ಉತ್ತಮ ಆಡಳಿತ ನಿರ್ವಹಣೆ ಮತ್ತು ಅಭಿವೃದ್ಧಿ ಕಾರ್ಯಗಳಿಗಾಗಿ 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದ ಉಡುಪಿ ತಾಲೂಕು 80 ಬಡಗಬೆಟ್ಟು ಗ್ರಾಮ ಪಂಚಾಯಿತಿಗೆ ಸೋಮವಾರ ಬೆಂಗಳೂರಿನ ವಿಧಾನ ಸೌಧ ಬ್ಯಾಂಕ್ವೆಟ್ ಹಾಲಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರಶಸ್ತಿ ಫಲಕ, ಪ್ರಶಸ್ತಿ ಪತ್ರ ಹಾಗೂ 5 ಲಕ್ಷ ನಗದನ್ನು ಪಂಚಾಯತ್ ಅಧ್ಯಕ್ಷರಾದ ಕೇಶವ ಕೋಟ್ಯಾನ್ ಹಾಗೂ ಪಿಡಿಓ ವಿರೂಪಾಕ್ಷಯ್ಯ ಕುಲಕರ್ಣಿ ಅವರಿಗೆ ಪ್ರದಾನ ಮಾಡಿದರು.
ಇದೇ ಸಂದರ್ಭದಲ್ಲಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಪಂಚಾಯತ್ ರಾಜ್ ಇಲಾಖೆಯ ಉನ್ನತ ಅಧಿಕಾರಿಗಳು ಹಾಜರಿದ್ದರು.


















