ಉಡುಪಿ: ದನ ಕಳ್ಳತನ ಮಾಡಿ ಸಾಗಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬೈಂದೂರು ಪೋಲಿಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸಾಸ್ತಾನ ನಿವಾಸಿ ಮೊಹಮ್ಮದ್ ಕೈಪ್ ಮತ್ತು ಉಚ್ಚಿಲ ಕಾಪು ನಿವಾಸಿ ಮೊಹಮ್ಮದ್ ಸುಹೇಲ್ ಖಾದರ್ ಎಂದು ಗುರುತಿಸಲಾಗಿದೆ.
ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪದೇ ಪದೇ ದನ ಕಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಆರೋಪಿಗಳ ಪತ್ತೆಗೆ 3 ತಂಡಗಳನ್ನು ರಚಿಸಲಾಗಿತ್ತು. ಕಾರ್ಯಾಚರಣೆ ಇಳಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ದನಕಳ್ಳತನಕ್ಕೆ ಉಪಯೋಗಿಸಿದ ಮೂರು ಕಾರುಗಳನ್ನು ವಶಕ್ಕೆ ಪಡೆದಿದ್ದು, ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 4 ದನಗಳನ್ನು ರಕ್ಷಿಸಿ ಗೋಶಾಲೆಗೆ ಬಿಡಲಾಗಿದೆ.












