ಬಾಲಾಕೋಟ್ ದಾಳಿ ನಂತರ ಜೈಷ್ ಕ್ಯಾಂಪ್ ಅಫ್ಘಾನಿಸ್ತಾನಕ್ಕೆ ಸ್ಥಳಾಂತರ

ನವದೆಹಲಿ, ಜು. 8: ಭಾರತ ವಾಯು ಸೇನೆಯಿಂದ ಬಾಲಾಕೋಟ್ ನಲ್ಲಿ ಜೈಷ್ ಇ ಮೊಹ್ಮದ್ ನ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದ ನಂತರ ಉಗ್ರರ ಮುಖ್ಯ ತರಬೇತಿ ಶಿಬಿರಗಳನ್ನು ಸ್ಥಳಾಂತರಿಸಲಾಗಿದೆ.

ಮೂಲಗಳ ಪ್ರಕಾರ, ಜೈಷೆ ತರಬೇತಿ ಶಿಬಿರಗಳನ್ನು ಅಫ್ಘಾನಿಸ್ತಾನಕ್ಕೆ ಸ್ಥಳಾಂತರ ಮಾಡಲಾಗಿದ್ದು. ಇದರಿಂದ ಹೊಸ ಚಿಂತೆ ಶುರುವಾಗಿದೆ. ಅಫ್ಘಾನಿಸ್ತಾನಕ್ಕೆ ತರಬೇತಿ ಶಿಬಿರಗಳು ಸ್ಥಳಾಂತರ ಆದ ಮೇಲೆ, ಭಾರತಕ್ಕೆ ಸಂಬಂಧಿಸಿದ ಅಲ್ಲಿನ ಯೋಜನೆ, ಸಂಸ್ಥೆ, ಕಟ್ಟಡಗಳ ಮೇಲೆ ದಾಳಿ ನಡೆಸುವ ಸಾಧ್ಯತೆ ಹೆಚ್ಚಿದೆ ಎಂದು ಗುಪ್ತಚರ ಇಲಾಖೆಯು ತಿಳಿಸಿದೆ.

ಈ ಬೆಳವಣಿಗೆ ಹಿನ್ನೆಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಅಫ್ಘಾನಿಸ್ತಾನದಲ್ಲಿನ ಭಾರತಕ್ಕೆ ಸಂಬಂಧಿಸಿದ ಸಂಸ್ಥೆಗಳಿಗೆ ಭದ್ರತೆ ಹೆಚ್ಚಿಸಲಾಗಿದೆ. ಇನ್ನು ಎಫ್ ಎಟಿಎಫ್ ನಿಂದ ಪಾಕಿಸ್ತಾನದ ಮೇಲೆ ಉಗ್ರ ನಿಗ್ರಹಕ್ಕೆ ಒತ್ತಡ ಹೆಚ್ಚಾಗಿದ್ದು, ಪಾಕ್ ನಿಂದ ಅಫ್ಘಾನಿಸ್ತಾನಕ್ಕೆ ಜೆಇಎಂ ಉಗ್ರ ನೆಲೆಗಳ ಸ್ಥಳಾಂತರಕ್ಕೆ ಕಾರಣ ಎನ್ನಲಾಗುತ್ತಿದೆ.