ಜೆಡಿಎಸ್ ಉಡುಪಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಬಾಲಕೃಷ್ಣ ಆಚಾರ್ಯ ಕಪ್ಪೆಟ್ಟು ನೇಮಕ

ಉಡುಪಿ: ಜೆಡಿಎಸ್ ಉಡುಪಿ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಆಚಾರ್ಯ ಕಪ್ಪೆಟ್ಟು ಆಯ್ಕೆಯಾಗಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರ ಅನುಮೋದನೆಯೊಂದಿಗೆ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಬಾಲಕೃಷ್ಣ ಆಚಾರ್ಯ ಉಡುಪಿ ಜಿಲ್ಲಾ ಜೆಡಿಎಸ್ ನಾಯಕರಾಗಿದ್ದಾರೆ. ಉಡುಪಿ ಜಿಲ್ಲೆಯ ಚಿನ್ನ ಬೆಳ್ಳಿ ಕೆಲಸಗಾರರ ಹಿಂದಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅನೇಕ ಸಂಘ ಸಂಸ್ಥೆಗಳಲ್ಲಿ ಸದಸ್ಯರಾಗಿದ್ದು ಜನ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಎಂದು ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.