ಉಡುಪಿ: ದೀಪಾವಳಿಯ ಅಮಾವಾಸ್ಯೆ ಪ್ರಯುಕ್ತ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು,ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು,ಅದಮಾರು ಕಿರಿಯ ಮಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಮಠದ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯರು “ಬಲೀಂದ್ರ ಪೂಜೆ”ಯನ್ನು ನಡೆಸಿದರು. ಬಳಿಕ ಪಂಚ ದೀಪ ಪ್ರಜ್ವಲನೆಯೊಂದಿಗೆ ವಾದ್ಯ ಮೇಳ ಸಹಿತ ಕೃಷ್ಣ ಮಠದ ಎಲ್ಲಾ ಭಾಗಗಳಿಗೂ ಮತ್ತು ಪರ್ಯಾಯ ಕೃಷ್ಣಾಪುರ ಮಠಕ್ಕೂ ದೀಪವನ್ನು ಪ್ರದರ್ಶಿಸಲಾಯಿತು.
ಅದಮಾರು ಮಠದಲ್ಲಿ ದೀಪಾವಳಿಯ ಬಲಿಪಾಡ್ಯಮಿ ನಿಮಿತ್ತ ಶ್ರೀ ಮಠದ ಗೋಶಾಲೆಯಲ್ಲಿರುವ ಗೋವುಗಳಿಗೆ ಅದಮಾರು ಮಠಾಧೀಶರಾದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು, ಅದಮಾರು ಕಿರಿಯ ಮಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಗೋಪೂಜೆಯನ್ನು ನೆರವೇರಿಸಿದರು.ಮಠದ ಪುರೋಹಿತರಾದ ಲಕ್ಷ್ಮೀಶ ಆಚಾರ್ಯರು ಧಾರ್ಮಿಕ ಕಾರ್ಯಕ್ರಮವನ್ನು ನಡೆಸಿದರು.