ಜಲಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ವಿಗ್ರಹಗಳ ವಿಸರ್ಜನೆ ನಿಷೇಧ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕೆರೆ, ಬಾವಿ, ನದಿ, ಕಾಲುವೆ ಹಾಗೂ ಇತರೇ ಜಲಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ಮಾಡಿರುವ ಹಾಗೂ ಬಣ್ಣ ಲೇಪಿತವಾದಂತಹ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಿ, ಅಧಿಸೂಚನೆ ಹೊರಡಿಸಿದ್ದು, ಜಿಲ್ಲೆಯಲ್ಲಿ ಗಣೇಶೋತ್ಸವ ಆಚರಣೆ ಸಂದರ್ಭ ಗಣೇಶೋತ್ಸವ ಸಮಿತಿಗಳಿಗೆ ಅನುಮತಿ ನೀಡುವ ಸಂದರ್ಭದಲ್ಲಿ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ಮಾಡಿರುವ ಗಣೇಶ ವಿಗ್ರಹಗಳನ್ನು ಬಳಸದೇ ಪರಿಸರ ಪ್ರೇಮಿ ಗಣೇಶ ವಿಗ್ರಹಗಳನ್ನು ಬಳಸುವಂತೆ ಮುಚ್ಚಳಿಕೆ ಪತ್ರವನ್ನು ಗಣೇಶೋತ್ಸವ ಸಮಿತಿ ಆಯೋಜಕರಿಂದ ಪಡೆದುಕೊಂಡು ಅನುಮತಿ ನೀಡಬೇಕು ಹಾಗೂ ನಿಯಮವನ್ನು ಉಲ್ಲಂಘಿಸುವವರ ವಿರುದ್ಧ ಉಚ್ಛ ನ್ಯಾಯಾಲಯದ ಡಬ್ಲ್ಯೂ.ಪಿ ನಂ: 927 ಟು 931 ಅಫ್ 2017, 1322 ಆಫ್ 2017 ರಲ್ಲಿನ ಆದೇಶದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.