ಬೆಂಗಳೂರು: ಉಡುಪಿಯಲ್ಲಿ ನಡೆಯಲಿರುವ ಅದಮಾರು ಮಠದ ಪರ್ಯಾಯ 2020-22ರ ಪೂರ್ವಭಾವಿಯಾಗಿ ನಡೆಯುವ ಅದಮಾರು ಶ್ರೀಗಳ ಪುರಪ್ರವೇಶ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಉಡುಪಿ ಶಾಸಕ ಕೆ. ರಘುಪತಿ ಭಟ್, ಮೀನುಗಾರ ಫೆಡರೇಶನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ, ಜಿಪಂ ಅಧ್ಯಕ್ಷ ದಿನಕರ ಬಾಬು ಮೊದಲಾದವರು ಇದ್ದರು.