‘ಬಿಗ್ ಬಾಸ್ ಕನ್ನಡ’ ರಿಯಾಲಿಟಿ ಶೋ ಪುನಾರಂಭಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಗ್ರೀನ್ ಸಿಗ್ನಲ್!

ಬೆಂಗಳೂರು: ಸರ್ಕಾರದ ನಿಯಮ ಉಲ್ಲಂಘನೆ ಆರೋಪದ ಮೇಲೆ ಸ್ಥಗಿತಗೊಂಡಿದ್ದ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋಗೆ ಡಿಸಿಎಂ ಡಿಕೆ ಶಿವಕುಮಾರ್ ಮಧ್ಯಸ್ಥಿಕೆ ವಹಿಸಿದ್ದು, ತಪ್ಪು ಸರಿಪಡಿಸಿಕೊಳ್ಳಲು ಜಾಲಿವುಡ್ ಸ್ಟುಡಿಯೋಸ್‌ಗೆ ಮತ್ತೊಂದು ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಕಂದಾಯ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳನ್ನು ಉಲ್ಲಂಘಿಸಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಆರೋಪದ ಮೇಲೆ ಕರ್ನಾಟಕದ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 12’ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಸ್ ಮನೆಯನ್ನು ಸರ್ಕಾರದಿಂದ ಸೀಜ್ ಮಾಡಲಾಗಿತ್ತು.

ಇದೀಗ ಬಿಗ್ ಬಾಸ್ ಕಾರ್ಯಕ್ರಮದ ನಿರ್ಮಾಣ ಸಂಸ್ಥೆಯಾದ ಜಾಲಿವುಡ್ ಸ್ಟುಡಿಯೋಸ್‌ಗೆ ಮತ್ತೊಂದು ಅವಕಾಶ ನೀಡುವಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜಿಲ್ಲಾಧಿಕಾರಿಗಳಿಗೆ ಸೂಚನೆ ರವಾನಿಸಿದ್ದಾರೆ. ಈ ಮೂಲಕ ಬಿಗ್ ಬಾಸ್ ಕಾರ್ಯಕ್ರಮದ ಪುನಾರಂಭಕ್ಕೆ ಹಸಿರು ನಿಶಾನೆ ತೋರಿಸಿದ್ದಾರೆ.