ಸಿಎಂ ಸಿದ್ರಾಮಯ್ಯನನ್ನು ಕೊಂದ್ರೆ ಹಿಂದುಗಳಿಗೆ ನೆಮ್ಮದಿ’; ಪೋಸ್ಟ್ ಹಾಕಿದ್ದ ಹೋಂ ಗಾರ್ಡ್ ನ ಬಂಧನ

ಉಡುಪಿ: ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಂಗಳೂರು ಪೊಲೀಸರು 8 ಜನರನ್ನು ಬಂಧಿಸಿದ್ದು, ತನಿಖೆ ಮುಂದುವರಿದೆ. ಈ ಘಟನೆ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಪ್ರತೀಕಾರದ ಬೆದರಿಕೆಗಳು ಹರಿದಾಡುತ್ತಿವೆ. ಇದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೋಂ ಗಾರ್ಡ್​ ಅವಹೇಳಕನಕಾರಿ ಕಮೆಂಟ್ ಮಾಡಿ ಪೋಸ್ಟ್ ಮಾಡಿದ್ದಾನೆ.

‘ಸಿಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ’ ಎಂದು ಕಾಮೆಂಟ್ ಹಾಕಿದ್ದ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೋಂ ಗಾರ್ಡ್ ಸಂಪತ್ ಸಾಲಿಯಾನ್​ ಬಂಧನವಾಗಿದೆ.

ಬೆಂಗಳೂರಿನ ಹೋಂ ಗಾರ್ಡ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಂಪತ್ ಸಾಲಿಯಾನ್​ ‘ಸಿಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ’ ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ. ಈ ಸಂಬಂಧ ಸದ್ಯ ಕಾರ್ಕಳ ಪೊಲೀಸರು ಹೋಂ ಗಾರ್ಡ್ ಸಂಪತ್​ನನ್ನು ಬಂಧಿಸಿದ್ದಾರೆ.