ನಾಳೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹರ್ ಘರ್ ತಿರಂಗಾ’ ಕಾರ್ಯಕ್ರಮ ಕಡ್ಡಾಯ; ರಾಜ್ಯ ಸರ್ಕಾರ ಮಹತ್ವದ ಆದೇಶ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್.15, 2025ರಂದು ಶಾಲಾ ಕಾಲೇಜುಗಳಲ್ಲಿ ಹರ್ ಘರ್ ತಿರಂಗಾ ಕಾರ್ಯಕ್ರಮವನ್ನು ಅನುಷ್ಠಾನ ಮಾಡುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಪಡೆದುಕೊಂಡ ಸ್ವಾತಂತ್ಯಕ್ಕೆ ಕಾರಣರಾದ ಎಲ್ಲರನ್ನೂ ಸದಾ ಸ್ಮರಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಇಂದಿನ ನಮ್ಮ ಸಂಭ್ರಮಕ್ಕೆ ತಳಪಾಯವಾಗಿ, ಮೆಟ್ಟಿಲುಗಳಾಗಿ ತಮ್ಮ ಜೀವನವನ್ನು ತ್ಯಾಗ ಮಾಡಿದ ಎಲ್ಲರನ್ನು ಮರೆಯದೆ ಸದಾ ಸ್ಮರಿಸುತ್ತಾ ಭವ್ಯ ಭಾರತವನ್ನು ಕಟ್ಟುವಲ್ಲಿ ನಮ್ಮ ಜವಾಬ್ದಾರಿಯುತ ಪಾತ್ರವನ್ನು ನಿರ್ವಹಿಸಬೇಕಿದೆ ಎಂದಿದ್ದಾರೆ.