ರಾಜ್ಯದಲ್ಲಿ ಭಾರಿ ಮಳೆ; 9 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ.

ಬೆಂಗಳೂರು: ರಾಜ್ಯದ ವಿವಿಧೆಡೆ ಭಾರಿ ಮಳೆ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆಯು 9 ಜಿಲ್ಲೆಗಳಿಗೆ ‘ರೆಡ್‌ ಅಲರ್ಟ್‌’ ಘೋಷಿಸಿದೆ. ಗುರುವಾರ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಕರಾವಳಿಯಲ್ಲಿ ಗಂಟೆಗೆ 30–40 ಕಿ.ಮೀ. ವೇಗದಲ್ಲಿ, ಉತ್ತರ ಒಳನಾಡಿನಲ್ಲಿ ಗಂಟೆಗೆ 40–50 ಕಿ.ಮೀ. ವೇಗದಲ್ಲಿ, ದಕ್ಷಿಣ ಒಳನಾಡಿನಲ್ಲಿ ಗಂಟೆಗೆ 50–60 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ.

ಕೊಪ್ಪಳ, ಹಾವೇರಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ತುಮಕೂರು, ಮೈಸೂರು, ದಾವಣಗೆರೆ, ಹಾಸನ, ವಿಜಯನಗರ ಜಿಲ್ಲೆಗಳಲ್ಲಿ ಗುಡುಗು, ಗಾಳಿ ಸಹಿತ ಭಾರಿ ಮಳೆಯಾಗಲಿದೆ.

ಚಾಮರಾಜನಗರ, ಚಿತ್ರದುರ್ಗ, ಕೋಲಾರ, ಬೀದರ್‌, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.