ಕನಕದಾಸ ಜಯಂತಿಯ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ಪುಷ್ಪನಮನ ಸಲ್ಲಿಕೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಾಸಶ್ರೇಷ್ಠ ಕನಕದಾಸರ ಜಯಂತಿಯ ಅಂಗವಾಗಿ ಬೆಂಗಳೂರಿನ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಯ ಮುಂಭಾಗ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಪುಷ್ಪನಮನ ಸಲ್ಲಿಸಿದರು.