ಬಹುನಿರೀಕ್ಷಿತ ‘ಕಾಂತಾರ ಚಾಪ್ಟರ್​​ 1’ ಸಿನಿಮಾ ರಿಲೀಸ್ ಡೇಟ್ ಫಿಕ್ಸ್!

                                                                                                                                                                                                ಬೆಂಗಳೂರು: ಸ್ಯಾಂಡಲ್​ವುಡ್ ನಟ ರಿಷಭ್​​ ಶೆಟ್ಟಿ ನಟಿಸಿ ನಿರ್ದೇಶಿಸುವ ಸಿನಿಮಾ ಕಾಂತಾರ ಚಾಪ್ಟರ್​​ 1 ಬಿಡುಗಡೆಗೆ ಸಿದ್ಧವಾಗಿದೆ. ಸಿನಿಮಾ ತಂಡ ಈ ಕುರಿತಾಗಿ ಇಂಟ್ರಸ್ಟಿಂಗ್​ ಮಾಹಿತಿಯನ್ನು ಹಂಚಿಕೊಂಡಿದೆ.

ಸದ್ಯ ಪೋಸ್ಟ್ ಪ್ರೊಡಕ್ಷನ್ಸ್ ಕೆಲಸಗಳಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಸಿನಿಮಾ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಮಾತ್ರ ಉಳಿದಿದ್ದು, ಹೊಸ ಅಪ್ಡೇಟ್ ಸದ್ಯದಲ್ಲೇ ಕೊಡಲಾಗುವುದು ಎಂದು ಹೊಂಬಾಳೆ ಫಿಲಂನವರು ಹೇಳಿದ್ದಾರೆ.

ಕಾಂತಾರ-1′ ಚಿತ್ರದಲ್ಲಿ ರುಕ್ಮಿಣಿ ವಸಂತ್ ನಾಯಕಿಯಾಗಿ ನಟಿಸಿದ್ದಾರೆ. ಇನ್ನುಳಿದಂತೆ ಗುಲ್ಷನ್ ದೇವಯ್ಯ ಸೇರಿದಂತೆ ದೊಡ್ಡ ತಾರಾಗಣ ಚಿತ್ರದಲ್ಲಿದೆ. ಸಾವಿರಾರು ಸಹ ಕಲಾವಿದರನ್ನು ಬಳಸಿಕೊಂಡು ಚಿತ್ರದ ಕೆಲ ಸನ್ನಿವೇಶಗಳನ್ನು ಸೆರೆಹಿಡಿಯಲಾಗಿದೆ. ಅಕ್ಟೋಬರ್ 2 ಗಾಂಧೀ ಜಯಂತಿಯಂದು ಈ ಸಿನಿಮಾ ಅದ್ಧೂರಿಯಾಗಿ ತೆರೆಗೆ ಬರಲಿದ್ದು ಚಿತ್ರತಂಡ ಸಿದ್ಧತೆಯಲ್ಲಿ ತೊಡಗಿಕೊಂಡಿದೆ.

ಗಾಂಧಿ ಜಯಂತಿಯಂದು ಸರ್ಕಾರಿ ರಜೆ ಇರುವುದರಿಂದ ಕಾಂತಾರ ಸಿನಿಮಾಕ್ಕೆ ಬಿಗ್ ಅಡ್ವಂಟೇಜ್ ಆಗುವ ಸಾಧ್ಯತೆ ಇದೆ. ಅಕ್ಟೋಬರ್ 2 ಗುರುವಾರದ ಆದರೆ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಥಿಯೇಟರ್​ಗಳು ಸಮಾನ್ಯವಾಗಿ ಹೌಸ್​ ಫುಲ್ ಆಗೋದು ಪಕ್ಕಾ. ಹೀಗಾಗಿ ಹೊಂಬಾಳೆ ಫಿಲಂ ದೊಡ್ಡ ಲಾಭದ ನಿರೀಕ್ಷೆಯಲ್ಲಿದೆ.

ರುಕ್ಮಿಣಿ ವಸಂತ್‌ ಕನಕವತಿ ಪಾತ್ರದಲ್ಲಿ ಮಿಂಚಿದ್ದಾರೆ. ಹೊಂಬಾಳೆ ಫಿಲಂ ಈ ಪ್ಯಾನ್​ ಇಂಡಿಯಾ ಸಿನಿಮಾಕ್ಕೆ ಬಂಡವಾಳ ಹೂಡಿಕೆ ಮಾಡಿದೆ. ಕನ್ನಡ, ಹಿಂದಿ, ಇಂಗ್ಲಿಷ್, ತೆಲುಗು, ತಮಿಳು, ಮಲಯಾಳಂ ಹಾಗೂ ಬೆಂಗಾಲಿ ಒಟ್ಟು 7 ಭಾಷೆಗಳಲ್ಲಿ ರಿಲೀಸ್​ ಆಗಲಿದೆ.