ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಆರ್ ಸಿಬಿ ತಂಡ ಸಂಭ್ರಮಾಚರಣೆ ಸಂದರ್ಭದಲ್ಲಿ ನೂಕುನುಗ್ಗಲಿನಿಂದ ಕಾಲ್ತುಳಿತ ಉಂಟಾದ ಪರಿಣಾಮ ನಾಲ್ಕು ಮಂದಿ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಆರ್ ಸಿಬಿ ಸಂಭ್ರಮಾಚರಣೆ ಕಣ್ತುಂಬಿಕೊಳ್ಳುವ ಸಲುವಾಗಿ ಚಿನ್ನಸ್ವಾಮಿ ಸ್ಟೇಡಿಯಂಗೆ ಜನಸಾಗರವೇ ಹರಿದುಬಂದಿತ್ತು. ಅಪಾರ ಸಂಖ್ಯೆಯಲ್ಲಿ ಯುವಕ, ಯುವತಿಯರು ಆಗಮಿಸುತ್ತಿದ್ದು, ಕ್ರೀಡಾಂಗಣದ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಈ ವೇಳೆ ನೂಕುನುಗ್ಗಲಿನಿಂದ ಕಾಲ್ತುಳಿತ ಉಂಟಾಗಿದೆ.
ಘಟನೆಯಲ್ಲಿ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಈಗಾಗಲೇ ಓರ್ವ ಯುವತಿ ಸೇರಿ ನಾಲ್ಕು ಮಂದಿ ಕೊನೆಯುಸಿರೆಳೆದಿದ್ದು, ಆರು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.












