ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ಗೆ ಬಿಗ್ ಶಾಕ್ ಎದುರಾಗಿದೆ. ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್ನ ನ್ಯಾ.ಜೆ.ಬಿ.ಪರ್ದಿವಾಲಾ,.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದರಿಂದ ದರ್ಶನ್ ಜೈಲು ಸೇರಬೇಕಾದ ಪರಿಸ್ಥಿತಿ ಬಂದಿದೆ.
ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ’ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ‘ಆರೋಪಿ ಎಷ್ಟೇ ದೊಡ್ಡವರಿದ್ದರೂ ಅವರು ಕಾನೂನಿಗಿಂತ ದೊಡ್ಡವರಲ್ಲ. ಕಾನೂನು ಆಡಳಿತ ಎತ್ತಿ ಹಿಡಿಯಲಾಗಿದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಆರೋಪಿಗಳಿಗೆ 5 ಸ್ಟಾರ್ ಟ್ರೀಟ್ ಮೆಂಟ್ ನೀಡಲಾಗಿದೆ. ಜೈಲು ಸೂಪರಿಂಟೆಂಡ್ನನ್ನು ಸಸ್ಪೆಂಡ್ ಮಾಡಬೇಕಿತ್ತು’ ಎಂದು ಕೊರ್ಟ್ ಅಭಿಪ್ರಾಯಪಟ್ಟಿದೆ.












