‘ನಂಗೆ ಸ್ವಲ್ಪ ವಿಷ ಕೊಡಿ’: ಜಡ್ಜ್‌ ಮುಂದೆ ದರ್ಶನ್‌ ಮನವಿ!

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿ ನಟ (Darshan) ದರ್ಶನ್ ಜೈಲಿನ ನರಕಯಾತನೆ ತಾಳಲಾರದೆ ಜಡ್ಜ್​ ಎದುರು ದರ್ಶನ್ ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.

ನಾನು ಬಿಸಿಲು ನೋಡಿ 30 ದಿನಗಳಾಗಿವೆ. ಕೈ ಎಲ್ಲಾ ಫಂಗಸ್ ಬಂದಿದೆ. ಬೇರೆ ಯಾರಿಗೂ ಬೇಡ ನನಗೆ ಮಾತ್ರ ಪಾಯಿಸನ್ ನೀಡಲಿ. ಕೋರ್ಟ್​​ನಿಂದಲೇ ಈ ಆದೇಶ ನೀಡಬೇಕು’ ಎಂದು ದರ್ಶನ್ ಮನವಿ ಮಾಡಿದ್ದಾರೆ. ಆಗ ಜಡ್ಜ್ ‘ಹಾಗೆಲ್ಲಾ ನೀವು ಕೇಳುವಂತಿಲ್ಲ’ ಜಡ್ಜ್ ದರ್ಶನ್​ಗೆ ಕಿವಿ ಮಾತು ಹೇಳಿದ್ದಾರೆ.
‘ಜೈಲು ಅಧಿಕಾರಿಗಳಿಗೆ ಯಾವ ಆದೇಶ ನೀಡಬೇಕೋ ನೀಡುತ್ತೇವೆ. ನಿಮ್ಮ ಮನವಿ ಬಗ್ಗೆ ಮಧ್ಯಾಹ್ನ ಆದೇಶ ನೀಡುತ್ತೇವೆ’ ಎಂದು ವಿಚಾರಣೆಯನ್ನು 3 ಗಂಟೆಗೆ ಮುಂದೂಡಿದ್ದಾರೆ.

ವಿವರ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್​ ಹಾಗೂ ಪವಿತ್ರ ಗೌಡ ಗ್ಯಾಂಗ್ ಕಳೆದ ವರ್ಷ ಅರೆಸ್ಟ್ ಆಗಿದ್ದರು. ಆ ಬಳಿಕ ಅವರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಇದನ್ನು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್​​ನಲ್ಲಿ ಪ್ರಶ್ನೆ ಮಾಡಿತ್ತು. ಸುಪ್ರೀಂಕೋರ್ಟ್​ ದರ್ಶನ್ ಅವರ ಜಾಮೀನನ್ನು ರದ್ದು ಮಾಡಿ, ಯಾವುದೇ ವಿಶೇಷ ಸವಲತ್ತು ಸಿಗಬಾರದು ಎಂದು ಎಚ್ಚರಿಸಿತ್ತು.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ವಿಶೇಷ ಸವಲತ್ತು ಸಿಗದಂತೆ ನೋಡಿಕೊಳ್ಳಲಾಗುತ್ತಿದೆ. ಹೆಚ್ಚುವರಿ ದಿಂಬು ಹಾಗೂ ಬೇಡ್​​ಶೀಟ್​ಗಾಗಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿ ವೇಳೆ ವಿಡಿಯೋ ಕಾಲ್​ ಮೂಲಕ ದರ್ಶನ್ ವಿಚಾರಣೆಗೆ ಹಾಜರಾದರು. ಆಗ ಅಲ್ಲಿನ ಕಠಿಣ ನಿಯಮಗಳಿಂದ ನರಕಯಾತನೆ ಉಂಟಾಗುತ್ತಿರುವುದರಿಂದ ದರ್ಶನ್​ ನನಗೆ ಮಾತ್ರ ಪಾಯಿಸನ್ ನೀಡಲಿ. ಕೋರ್ಟ್​​ನಿಂದಲೇ ಈ ಆದೇಶ ನೀಡಬೇಕು ಎಂದು ಜಡ್ಜ್ ಮುಂದೆ ಹೇಳಿದ್ದಾರೆ ಎನ್ನಲಾಗಿದೆ.