ಉಡುಪಿ: ಉದ್ಯಾವರ ನದಿಯಲ್ಲಿ ಶನಿವಾರ ಬ್ಯಾಂಕ್ ಉದ್ಯೋಗಿಯೊಬ್ಬರ ಶವ ಪತ್ತೆಯಾಗಿದ್ದು, ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಮೃತರನ್ನು ಉಡುಪಿಯ ಕೆನರಾ ಬ್ಯಾಂಕ್‌ನ ಉದ್ಯೋಗಿ ರಿಯಾಜ್ (43) ಎಂದು ಗುರುತಿಸಲಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ರಿಯಾಜ್ ಅವರು ನದಿಯ ಬಳಿ ತೆರಳಿದ್ದ ವೇಳೆ ಕಾಲು ಜಾರಿ ನೀರಿಗೆ ಬಿದ್ದಿದ್ದು, ಮುಳುಗಿ ಮೃತಪಟ್ಟಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
ಘಟನೆಯ ಮಾಹಿತಿ ತಿಳಿದು ಕಾಪು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಯಿತು.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಾವಿನ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿಸಿದ್ದಾರೆ.

















