ಎನ್ ಆರ್ ಪುರ ನಿವಾಸಿ ಬನ್ನಾಡಿ ರಾಜೀವ ಪೂಜಾರಿ (66)ಯವರು ಜೂನ್ 1 ರಂದು ಸ್ವಗ್ರಹದಲ್ಲಿ ಅಕಾಲಿಕವಾಗಿ ನಿಧನ ಹೊಂದಿದರು. ಮೃತರು ಪತ್ನಿ ಪುತ್ರ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಇವರು ಎನ್ .ಆರ್. ಪುರದಲ್ಲಿ ಯಶಸ್ವಿ ಉದ್ಯಮಿಯಾಗಿ, ಹತ್ತು ಹಲವು ಸಂಘಟನೆಗಳಲ್ಲಿ, ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ನರಸಿಂಹರಾಜಪುರ ಬಿಲ್ಲವ ಸಂಘದ ಪದಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು.

















