ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

ಉಡುಪಿ, ಬಂಟಕಲ್: ಶ್ರೀ ಮದ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ಮತ್ತು ನಿರಾಮಯ ಆರೋಗ್ಯ ವಿಜ್ಞಾನ ಸಂಸ್ಥೆ ಜಂಟಿಯಾಗಿ ದಿನಾಂಕ 15 ಆಗಸ್ಟ್ 2025 ರಂದು 79ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಸೋದೆ ವಾದಿರಾಜ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿಯಾದ ಡಾ. ರಾಧಕೃಷ್ಣ ಎಸ್ ಐತಾಳ್ ಅವರು ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಅವರು ಮಾತನಾಡಿ ರಾಷ್ಟ್ರ ನಿರ್ಮಾಣದಲ್ಲಿ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ತಿಳಿಸಿದರು. ನವದೆಹಲಿಯ ರಾಜ್‌ಪಥ್‌ನಲ್ಲಿ ನಡೆದ 76ನೇ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಭಾಗವಹಿಸಿದ ಸಂಸ್ಥೆಯ ವಿದ್ಯಾರ್ಥಿನಿ ಜೆಇಒ ಅರ್ಪಿತ ತಂತ್ರಿ ಇವರು ಕರ್ತವ್ಯ, ಶಿಸ್ತು ಮತ್ತು ದೇಶ ಭಕ್ತಿಯ ಬಗ್ಗೆ ಮಾತನಾಡಿದರು.

ಈ ಕಾರ್ಯಮದಲ್ಲಿ ನಿರಾಮಯ ನರ್ಸಿಂಗ್ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಸಂಸ್ಥೆಯ ನಿರ್ದೇಶಕರಾದ ಡಾ. ನವೀನ್ ಬಲ್ಲಾಳ್, ಪ್ರಾಂಶುಪಾಲರಾದ ಶ್ರೀಮತಿ ರೋಶನಿ ರೊಡ್ರಿಗಸ್ ಮತ್ತು ಶ್ರೀ ಶಿವಶಂಕರ್ ಪೈ, ಇಂಜಿನಿಯರಿಂಗ್ ಕಾಲೇಜಿನ ಡೀನ್‌ಗಳು, ವಿವಿಧ ವಿಭಾಗದ ಮುಖ್ಯಸ್ಥರು, ಅಧ್ಯಾಪಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ, ಅಧ್ಯಾಪಕರಿಗೆ ಮತ್ತು ಸಿಬ್ಬಂದಿಗಳಿಗೆ ದೇಶ ಭಕ್ತಿಗೀತೆ ಮತ್ತು ವಿದ್ಯಾರ್ಥಿಗಳಿಗೆ ಪೋಸ್ಟರ್ ತಯಾರಿಸುವ ಸ್ಪರ್ಧೆಯನ್ನು ಆಯೋಜಿಸಿ ಬಹುಮಾನವನ್ನು ನೀಡಲಾಯಿತು.