ಉಡುಪಿ: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ದಿನಾಂಕ 6 ಮತ್ತು 8 ನವೆಂಬರ್ 2025 ರಂದು ನಡೆದ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್ಮೆಂಟ್ ಇಲ್ಲಿ ರಾಷ್ಟ್ರಮಟ್ಟದ 36 ಗಂಟೆಗಳ ಹ್ಯಾಕಥಾನ್ “DevHost 2025” ಆಯೋಜಿಸಲಾಗಿತ್ತು. ದೇಶಾದ್ಯಂತ ವಿವಿಧ ಕಾಲೇಜಿನ ವಿದ್ಯಾರ್ಥಿಗಳ ತಂಡಗಳು ಭಾಗವಹಿಸಿದ್ದು ಇದರಲ್ಲಿ 30 ತಂಡಗಳು ಮಾತ್ರ ಅಂತಿಮ ಸುತ್ತಿಗೆ ಆಯ್ಕೆಯಾಗಿದೆ.
ಈ 30 ತಂಡಗಳಲ್ಲಿ ಸಂಸ್ಥೆಯ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಡಾಟಾ ಸೈನ್ಸ್ ವಿಭಾಗದ ಮೂರನೇ ವರ್ಷದ ವಿದ್ಯಾರ್ಥಿಗಳಾದ ಹಿತೇಶ್, ಶಮಾ ಪಟ್ವರ್ಧನ್ ಮತ್ತು ಅಮ್ರತಾ ಇವರ ಪವರ್ ರೇಂಜರ್ಸ್ ತಂಡವು ದ್ವಿತೀಯ ಸ್ಥಾನದೊಂದಿಗೆ 20,000 ನಗದು ಬಹುಮಾನವನ್ನು ಪಡೆದಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಡೀನ್ಗಳು ಅಭಿನಂದನೆಗಳನ್ನು ವ್ಯಕ್ತಪಡಿಸಿದ್ದಾರೆ.















