ಬಂಟ್ವಾಳ: ತುಳುಚಿತ್ರ ನಟನ ಬರ್ಬರ ಹತ್ಯೆ

ಬಂಟ್ವಾಳ: ತುಳು ಚಿತ್ರದ ನಟನೊಬ್ಬನನ್ನು ದುಷ್ಕರ್ಮಿಗಳ ತಂಡ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಇಂದು ಮಧ್ಯಾಹ್ನ ಬಂಟ್ವಾಳ್ ಬಿಸಿರೋಡ್ ನಲ್ಲಿ ನಡೆದಿದೆ.

ಹಿಂದೂ ಸಂಘಟನೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಹಾಗೂ ತುಳು ಚಿತ್ರನಟ ಬಂಟ್ವಾಳ ನಿವಾಸಿ ಸುರೇಂದ್ರ ಬಂಟ್ವಾಳ್ ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದಾರೆ.

ಸುರೇಂದ್ರ ಬಂಟ್ವಾಳ್ ಬಿಸಿರೋಡ್ ನಲ್ಲಿರುವ ತನ್ನ ಫ್ಲ್ಯಾಟ್ ನಲ್ಲಿ ವಾಸವಿದ್ದು ಇಂದು ಮಧ್ಯಾಹ್ನ ಸುಮಾರಿಗೆ ಅವರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಘಟನೆ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ಕೊಟ್ಟು ಪರಿಶೀಲನೆಯನ್ನು ನಡೆಸುತ್ತಿದ್ದಾರೆ. ಸುರೇಂದ್ರ ಬಂಟ್ವಾಳ್ ಜೊತೆಗಿದ್ದವರೇ ಕೃತ್ಯದಲ್ಲಿ ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ.