ಬಂಟ್ವಾಳ: ಬಂಟ್ವಾಳದಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಬಂಟ್ವಾಳದ ಮೃತ ಮಹಿಳೆಯ ಅತ್ತೆಗೆ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಎಪ್ರಿಲ್ 19 ರಂದು ಕೊರೊನಾದಿಂದ ಬಂಟ್ವಾಳದ ಮಹಿಳೆ ಮೃತಪಟ್ಟಿದ್ದರು.
ಇದೀಗ ಅವರ ಅತ್ತೆ 75 ವರ್ಷ ಪ್ರಾಯದ ವೃದ್ಧೆಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ.
ಎಪ್ರಿಲ್ 18 ರಿಂದ ವೃದ್ಧೆ ಖಾಸಗಿ ಆಸ್ಪತ್ರೆಯಲ್ಲಿ ಪಾರ್ಶ್ವವಾಯುಗೆ ಸಂಬಂಧಿಸಿದಂತೆ ಚಿಕಿತ್ಸೆ ಪಡೆಯುತ್ತಿದ್ದರು. ಸದ್ಯ ಅವರನ್ನು ಮಂಗಳೂರಿನ ಕೊವೀಡ್ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.