ಮಂಗಳೂರು: ಕೊರೊನಾ ಸೋಂಕಿಗೆ ಬಂಟ್ವಾಳದ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ಸಂಸದ ನಳಿನ್ ಕುಮಾರ್ ಅವರು ಸೋಮವಾರ ಸ್ಥಳೀಯ ಶಾಸಕರು, ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ಮಹಿಳೆಯ ಕುಟುಂಬದ ಸದಸ್ಯರು ಸೇರಿದಂತೆ ಅವರ ಸಂಪರ್ಕದಲ್ಲಿದ್ದ 28 ಮಂದಿಗೆ ಕ್ವಾರಂಟೈನ್ ಮಾಡಲಾಗಿದೆ.
ಜತೆಗೆ ಮಹಿಳೆಗೆ ಚಿಕಿತ್ಸೆ ನೀಡಿದ ವೈದ್ಯರು ಮತ್ತು ಇತರ 6 ಸಿಬಂದಿ ಸಹಿತ ಒಟ್ಟು 34 ಮಂದಿಗೆ ಕ್ವಾರಂಟೈನ್ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಮಾಹಿತಿ ನೀಡಿದರು.
ಅಲ್ಲದೇ ಅವರು ಬೇರೆ ಯಾವ ಕಡೆಗೆ ತೆರಳಿದ್ದಾರೆ ಎನ್ನುವ ಕುರಿತು ಮಹಿಳೆಯ ಟ್ರಾವೆಲ್ ಹಿಸ್ಟರಿ ಸಂಗ್ರಹಿಸಲಾಗುತ್ತಿದೆ. ಜತೆಗೆ ಬಂಟ್ವಾಳ ಪೇಟೆಯನ್ನು ಸಂಪೂರ್ಣ ಸೀಲ್ಡೌನ್ ಮಾಡಲಾಗಿದೆ. ನಿವಾಸಿಗಳಿಗೆ ಆಹಾರ ಸಾಮಾಗ್ರಿಗಳನ್ನು ಮನೆಗಳಿಗೆ ತಲುಪಿಸುವ ಕಾರ್ಯ ನಡೆಸಲಾಗುತ್ತಿದೆ ಎಂದು ಸಭೆಯ ಬಳಿಕ ಸಂಸದ ನಳಿನ್ ಕುಮಾರ್ ಹೇಳಿಕೆ ನೀಡಿದ್ದಾರೆ.