ಬಾರ್ಕೂರು ನೇಶನಲ್ ಕೈಗಾರಿಕಾ ತರಬೇತಿ ಸಂಸ್ಥೆ: ಮೇ23 & ಮೇ24 ರಂದು ‘ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್`ನಿಂದ ಕ್ಯಾಂಪಸ್ ಇಂಟರ್ವ್ಯೂ

ಬ್ರಹ್ಮಾವರ: ದಿ ಬಾರ್ಕೂರು ಎಜುಕೇಶನಲ್ ಸೊಸೈಟಿಯ ಆಡಳಿತಕ್ಕೊಳಪಟ್ಟ “ನೇಶನಲ್ ಕೈಗಾರಿಕಾ ತರಬೇತಿ ಸಂಸ್ಥೆ”ಯಲ್ಲಿ ಪ್ರತೀ ವರ್ಷ ಬೆಂಗಳೂರಿನ ಪ್ರಸಿದ್ಧ ಕಂಪನಿಯಾದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ ಕ್ಯಾಂಪಸ್ ಇಂಟರ್ವ್ಯೂ ಮಾಡುತ್ತ ಬಂದಿದ್ದು, ಈ ವರುಷ ಕೂಡ ಇದೇ ಬರುವ 23/05/2025 ಮತ್ತು 24/05/2025ನೇ ಶುಕ್ರವಾರ ಹಾಗೂ ಶನಿವಾರದಂದು ಕ್ಯಾಂಪಸ್ ಇಂಟರ್ವ್ಯೂ ನಡೆಸಲಿದೆ.

ಉಡುಪಿ ಜಿಲ್ಲೆಯ ಎಲ್ಲಾ ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಐಟಿಐಗಳು ಭಾಗವಹಿಸಿ ಇದರ ಪ್ರಯೋಜನವನ್ನು ಪಡೆದುಕೊಳ್ಳಲಿದ್ದಾರೆ ಎಂದು ಪ್ರಾಂಶುಪಾಲರು ಪ್ರಕಟಣೆ ತಿಳಿಸಿದ್ದಾರೆ.