ಬ್ರಹ್ಮಾವರ: ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬಾರ್ಕೂರು ಹಾಲೆಕೊಡಿ ನದಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.
ಬಾರ್ಕೂರು ಹೊಸಾಳ ಗ್ರಾಮದ ಹರ್ಷ (25) ಮತ್ತು ಕಾರ್ತಿಕ್ (21) ಮೃತ ದುರ್ದೈವಿಗಳು. ಈ ಇಬ್ಬರು ಗುರುವಾರ ರಾತ್ರಿ ನದಿಯಲ್ಲಿ ಮೀನಿಗೆ ಬಲೆ ಬೀಸಿ ಹೋಗಿದ್ದರು. ಇಂದು ಬೆಳಿಗ್ಗೆ ಬಲೆಯನ್ನು ಎಳೆಯಲು ನದಿಗೆ ಇಳಿದಿದ್ದು, ಈ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ. ಬಳಿಕ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಳಿಗ್ಗೆ 11 ಗಂಟೆ ಸುಮಾರಿಗೆ ಇಬ್ಬರ ಮೃತದೇಹವನ್ನು ಪತ್ತೆ ಮಾಡಿ ಹೊರತೆಗಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.