ಬೆಂಗಳೂರು: ರಾಜ್ಯದ 30 ನೇ ಮುಖ್ಯಮಂತ್ರಿಯಾಗಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಬಸವರಾಜ ಬೊಮ್ಮಾಯಿ ಅವರಿಗೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋತ್ ಪ್ರಮಾಣವಚನ ಭೋದಿಸಿದ್ದಾರೆ. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಬೊಮ್ಮಾಯಿಯವರ ಪದಗ್ರಹಣ ಕಾರ್ಯಕ್ರಮಕ್ಕೆ ಕೇಂದ್ರದ ನಾಯಕರು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ., ರಾಜ್ಯ ನಾಯಕರು ಹಾಗೂ ಕುಟುಂಬಸ್ಥರು ಸಾಕ್ಷಿಯಾಗಿದ್ದಾರೆ.