ಅಂತರ್‌ಕಾಲೇಜು ಬಾಸ್ಕೆಟ್‌ಬಾಲ್- ನಿಟ್ಟೆ, ಆಳ್ವಾಸ್ ಕಾಲೇಜಿಗೆ ಸಮಗ್ರ ಪ್ರಶಸ್ತಿ

ನಿಟ್ಟೆ: ಸೆ. ೬ ಮತ್ತು ೭ ರಂದು ಡಾ.ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ನಡೆದ ಅಂತರ್‌ಕಾಲೇಜು ಮಟ್ಟದ ಪುರುಷರ ಹಾಗೂ ಮಹಿಳೆಯರ ಬಾಸ್ಕೆಟ್‌ಬಾಲ್ ಪಂದ್ಯಾವಳಿಯಲ್ಲಿ ಪುರುಷರ ವಿಭಾಗದಲ್ಲಿ ಆಳ್ವಾಸ್ ಕಾಲೇಜು ಚಾಂಪಿಯನ್ ಆಗಿ ಮೂಡಿಬಂದರೆ ಅತಿಥೇಯ ಡಾ.ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನ ತಂಡವು ದ್ವಿತೀಯ ಸ್ಥಾನ ಗಳಿಸಿದೆ. ಮಹಿಳೆಯರ ವಿಭಾಗದಲ್ಲಿ ಅತಿಥೇಯ ಡಾ.ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನ ತಂಡವು ಚಾಂಪಿಯನ್ ಹಾಗೂ ಆಳ್ವಾಸ್ ಕಾಲೇಜು ದ್ವಿತೀಯ ಸ್ಥಾನ ಪಡೆದಿದೆ.

ಪುರುಷರ ವಿಭಾಗದಲ್ಲಿ ಆಳ್ವಾಸ್‌ನ ಜೋಸೆಫ್ ಪ್ರತೀಪ್ ಹಾಗೂ ಮಹಿಳೆಯರ ವಿಭಾಗದಲ್ಲಿ ಡಾ.ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನ ಹರ್ಷಿತ ಬೆಸ್ಟ್ ಪ್ಲೇಯರ್ ವೈಯಕ್ತಿಕ ಪ್ರಶಸ್ತಿ ಗಳಿಸಿರುವರು.

ಸಮಾರೋಪ ಸಮಾರಂಭದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಕ್ರೀಡಾ ನಿರ್ದೇಶಕ ಡಾ.ಕಿಶೋರ್ ಕುಮಾರ್ ಸಿ.ಕೆ ಉಪನಿರ್ದೇಶಕ ಡಾ.ಪ್ರಸನ್ನ ಕುಮಾರ್, ಡಾ.ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ವೀಣಾ ಕುಮಾರಿ ಬಿ.ಕೆ, ಸಂಸ್ಥೆಯ ಕ್ರೀಡಾ ಆಡಳಿತಾಧಿಕಾರಿ ಶ್ಯಾಮ್‌ಸುಂದರ್, ಬಾಸ್ಕೆಟ್‌ಬಾಲ್ ತರಬೇತುದಾರ ರವಿಪ್ರಕಾಶ್, ದೈಹಿಕ ಶಿಕ್ಷಣ ನಿರ್ದೇಶಕ ಡಾ. ನಿತಿನ್ ಉಪಸ್ಥಿತರಿದ್ದರು.