ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಕನಿಷ್ಠ 10 ವರ್ಷಗಳಿಂದ ವಾಸವಿದ್ದು, ವಾರ್ಷಿಕ ಆದಾಯ ರೂ.2.00 ಲಕ್ಷ ಒಳಗಿರುವ, ಶೇ. 75 ಮತ್ತು ಅದಕ್ಕಿಂತ ಹೆಚ್ಚಿನ ದೈಹಿಕ ವಿಕಲತೆ ಹೊಂದಿದ ಅರ್ಹ ವಿಕಲಚೇತನರಿಂದ ಬ್ಯಾಟರಿ ಚಾಲಿತ ವೀಲ್ ಚೇರ್ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂ.ಸಂಖ್ಯೆ: 0820- 2574810, 0820-2574811, ಅಥವಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳಮಹಡಿ, ಸಿಂಡಿಕೇಟ್ ಬ್ಯಾಂಕ್ ಹತ್ತಿರ, ಜಿಲ್ಲಾ ಪಂಚಾಯತ್ ವಿಭಾಗ, ರಜತಾದ್ರಿ, ಮಣಿಪಾಲ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.