ಸಾಕಾನೆಗಳ ಕಾಳಗ: ದುಬಾರೆಯಲ್ಲಿ ಗಾಯಗೊಂಡಿದ್ದ ‘ಮಾರ್ತಾಂಡ’ ಆನೆ ಇನ್ನಿಲ್ಲ!

ಮಡಿಕೇರಿ: ಕುಶಾಲನಗರದ ದುಬಾರೆ ಸಾಕಾನೆ ಶಿಬಿರದಲ್ಲಿ ಕಂಜನ್ ಎಂಬ ಆನೆಯಿಂದ ದಾಳಿಗೆ ಒಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಮಂಗಳವಾರ ಮೃತಪಟ್ಟಿದೆ.

ಗಂಭೀರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅದು ಮೃತಪಟ್ಟಿತು ಎಂದು ವಲಯ ಅರಣ್ಯಾಧಿಕಾರಿ ರಕ್ಷಿತ್ ತಿಳಿಸಿದರು‌. ಸೋಮವಾರ ಕಂಜನ್ ಆನೆಯು ಸ್ನಾನ ಮಾಡಿಸುತ್ತಿದ್ದ ವೇಳೆ ಏಕಾಏಕಿ ಮಾರ್ತಾಂಡ ಆನೆ ಮೇಲೆ ದಾಳಿ ನಡೆಸಿತು. ಮಾರ್ತಾಂಡ ಆನೆ ಬಿದ್ದು ಅದರಡಿ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಇದೀಗ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಹ ಮೃತಪಟ್ಟಿದೆ.