ಬಂಟ್ವಾಳ: ಬಿಸಿರೋಡಿನ ಸರ್ಕಲ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟು ಆರು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ.
ಮೃತರನ್ನು ಬೆಂಗಳೂರು ಪೀಣ್ಯ ನಿವಾಸಿಗಳಾದ ರವಿ (64) ರಮ್ಯ (23) ಹಾಗೂ ನಂಜಮ್ಮ ( 75) ಎಂದು ಗುರುತಿಸಲಾಗಿದೆ.
ಉಳಿದಂತೆ ಕೀರ್ತಿ, ಸುಶೀಲಾ, ಬಿಂದು ಹಾಗೂ ಪ್ರಶಾಂತ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಾಲಕ ಸುಬ್ರಹ್ಮಣ್ಯ ಹಾಗೂ ಕಿರಣ್ ಅವರು ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಇವರು ಬೆಂಗಳೂರಿನಿಂದ ಇನ್ನೋವಾ ಕಾರಿನಲ್ಲಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಕೃಷ್ಣನ ದರ್ಶನಕ್ಕೆಂದು ಹೊರಟಿದ್ದರು ಎನ್ನಲಾಗಿದೆ. ಮುಂಜಾನೆ ಸುಮಾರು 4.40ರ ಸುಮಾರಿಗೆ ಬಿಸಿರೋಡಿನ ಎನ್.ಜಿ.ಸರ್ಕಲ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ.


















