ಬಿಬಿ ಹೆಗ್ಡೆ ಕಾಲೇಜು: ಬಿ.ಸಿ.ಎ. ಪದವಿಯಲ್ಲಿ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ

ಕುಂದಾಪುರ: ಜೂನ್ 12 ಭಾನುವಾರದಂದು ಮಂಗಳೂರು ವಿಶ್ವವಿದ್ಯಾನಿಲಯದಿಂದ ಬಿ.ಸಿ.ಎ. ಪದವಿಯಲ್ಲಿ ರ‍್ಯಾಂಕ್ ಪಡೆದ ಕಾಲೇಜಿನ ವಿದ್ಯಾರ್ಥಿಗಳ ಸನ್ಮಾನ ಸಮಾರಂಭವನ್ನು ಮೂಕಾಂಬಿಕಾ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಬಿ.ಸಿ.ಎ. ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಗಳಿಸಿದ ಸಾಧಕಿ ಕಾವ್ಯ ದೇವಾಡಿಗ ಹಾಗೂ ನಾಲ್ಕನೆ ರ‍್ಯಾಂಕ್ ಗಳಿಸಿದ ಸುಮಧುರ ಶೆಟ್ಟಿ ಇವರನ್ನು ಕರ್ನಾಟಕ ಬ್ಯಾಂಕ್ ಸಿಇಒ ಮಹಾಬಲೇಶ್ವರ್ ಎಮ್.ಎಸ್. ಸನ್ಮಾನಿಸಿದರು.

ಜಿಲ್ಲಾಧಿಕಾರಿ ಕೂರ್ಮಾ ರಾವ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಐ.ಎ.ಎಸ್. ಮತ್ತು ಐ.ಪಿ.ಎಸ್. ಕ್ಷೇತ್ರದಲ್ಲಿ ಸಾಧನೆ ಮಾಡಿ ಶ್ರೇಷ್ಠ ಸಾಧಕರಾಗಿರಿ ಎಂದರು.

ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ಹಾಗೂ ಬೈಂದೂರು ಕ್ಷೇತ್ರದ ಶಾಸಕ ಬಿ.ಎಮ್. ಸುಕುಮಾರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾಲೇಜಿನ ವ್ಯವಸ್ಥಾಪನಾ ಸಮಿತಿಯ ಕಾರ್ಯದರ್ಶಿ ಕೆ. ಸೀತಾರಾಮ ನಕ್ಕತ್ತಾಯ, ಸದಸ್ಯ ಅರುಣ್ ಕುಮಾರ್ ಶೆಟ್ಟಿ, ಸುಧಾಕರ್ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪ್ರಾಂಶುಪಾಲ ಪ್ರೊ. ಕೆ. ಉಮೇಶ್ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು, ಉಪನ್ಯಾಸಕಿ ರೇಷ್ಮಾ ಶೆಟ್ಟಿ ನಿರೂಪಿಸಿದರು.