ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಕೋಲ್ಕತ್ತಾ: ಟೀಂ ಇಂಡಿಯಾ ಮಾಜಿ ನಾಯಕ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಲಘು ಹೃದಯಾಘಾತ ಉಂಟಾಗಿದ್ದು, ಕೋಲ್ಕತ್ತಾದ ವುಡ್ ಲ್ಯಾಂಡ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಅವರನ್ನು ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಒಳಪಡಿಸುವ ಸಾಧ್ಯತೆಯಿದೆ. ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಗಂಗೂಲಿ ಆಪ್ತ ಮೂಲಗಳು ಹೇಳಿದ್ದಾರೆ.