ದಕ್ಷಿಣ ಕನ್ನಡ: ಇಲ್ಲಿನ ಕಡಬ ತಾಲೂಕಿನ ಸುಪ್ರಸಿದ್ದ ದೇವಾಲಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಾನುವಾರದಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ರ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಪ್ರಧಾನ ಕಾರ್ಯದರ್ಶಿ ಜಯ್ ಶಾ ಮತ್ತು ಪತ್ನಿ ರಿಷಿತಾ ಶಾ ಸಮೇತರಾಗಿ ಭೇಟಿ ನೀಡಿ ಆಶ್ಲೇಷ ಬಲಿ ಪೂಜೆ ಸಲ್ಲಿಸಿದರು.
ಅವರು ದೇವಾಲಯದ ಸಂಕೀರ್ಣದಲ್ಲಿರುವ ಹೊಸಲಿಗಮ್ಮ ದೇಗುಲದಲ್ಲಿ ಪೂಜೆ ಸಲ್ಲಿಸಿದರು ಮತ್ತು ತಮ್ಮ ತಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೆಸರಿನಲ್ಲಿ ದೇವಾಲಯದಲ್ಲಿ ನೀಡಲಾಗುವ ದೈನಂದಿನ ಊಟಕ್ಕೆ ದೇಣಿಗೆ ನೀಡಿದರು.
ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಮೋಹನರಾಮ ಸುಳ್ಳಿ ಅವರನ್ನು ಸನ್ಮಾನಿಸಿದರು.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಮತ್ತು ಕ್ಯಾಂಪ್ಕೋ ನಿರ್ದೇಶಕ ಕೃಷ್ಣಪ್ರಸಾದ ಮಡ್ತಿಲ ಉಪಸ್ಥಿತರಿದ್ದರು.