ಉಡುಪಿ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ರಜತ ಉಡುಪಿ- ಬೀಚ್ ಉತ್ಸವ ಕಾರ್ಯಕ್ರಮವು ಜನವರಿ 20 ರಿಂದ 22 ರ ವರೆಗೆ ಮಲ್ಪೆಯಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದು, ಶಾಸಕ ಕೆ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾಪು ತಾಲೂಕು ಆಡಳಿತ ಇವರ ವತಿಯಿಂದ ಉಡುಪಿ ಜಿಲ್ಲೆಯ ರಜತ ಮಹೋತ್ಸವ ಸಮಾರಂಭವು ಜನವರಿ 21 ರಂದು ಮಧ್ಯಾಹ್ನ 2.30 ಕ್ಕೆ ಕಾಪು ಕಡಲ ಕಿನಾರೆಯಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಡಿ.ವಿ ಸದಾನಂದ ಗೌಡ ಉದ್ಘಾಟಿಸಲಿದ್ದು, ಶಾಸಕ ಲಾಲಾಜಿ ಆರ್ ಮೆಂಡನ್ ಅಧ್ಯಕ್ಷತೆ ವಹಿಸಲಿದ್ದಾರೆ.