ಬೆಳಗಾವಿ: 58 ಸದಸ್ಯ ಬಲದ ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, 58 ವಾರ್ಡ್ ಗಳಲ್ಲಿ 35 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಪಾಲಿಕೆಯನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ.
ಈ ಬಾರಿ ಪಕ್ಷದ ಚಿಹ್ನೆ ಮೇಲೆ ಚುನಾವಣೆ ನಡೆದಿತ್ತು. ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.
ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಧೂಳೀಪಟವಾಗಿದ್ದು, ಮೂವರು ಅಭ್ಯರ್ಥಿಗಳು ಮಾತ್ರ ಗೆಲುವು ಸಾಧಿಸಿದ್ದಾರೆ. ಎಐಎಂಐಎಂ ಪಕ್ಷ ಖಾತೆ ತೆರೆದಿದೆ. ಕಾಂಗ್ರೆಸ್ 10 ಸ್ಥಾನಗಳನ್ನು ಗೆದ್ದಿದೆ. ಪಕ್ಷೇತರರು 12 ವಾರ್ಡ್‌ಗಳಲ್ಲಿ ಗೆದ್ದಿದ್ದಾರೆ.
ಫಲಿತಾಂಶ ವಿವರ.
ಬಿಜೆಪಿ–35
ಕಾಂಗ್ರೆಸ್–10
ಪಕ್ಷೇತರರು: 12
ಎಐಎಂಐಎಂ: 1
ಹುಬ್ಬಳ್ಳಿ– ಧಾರವಾಡ ಪಾಲಿಕೆ ಫಲಿತಾಂಶ ಅತಂತ್ರ
ಧಾರವಾಡ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ ಹೊರಬಂದಿದ್ದು ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. 82 ವಾರ್ಡ್ ಗಳ ಪೈಕಿ 39 ಸ್ಥಾನಗಳಲ್ಲಿ ಗೆದ್ದಿರುವ ಬಿಜೆಪಿ ಅಧಿಕಾರ ಹಿಡಿಯುವ ಸಾಧ್ಯತೆ ಬಹುತೇಕ ಪಕ್ಕಾ ಆಗಿದೆ.
ಒಟ್ಟು 82 ವಾರ್ಡ್ ಗಳಿದ್ದು, 42 ಮ್ಯಾಜಿಕ್ ಸಂಖ್ಯೆಯಾಗಿದೆ.
ಫಲಿತಾಂಶ ವಿವರ.
ಬಿಜೆಪಿ–39
ಕಾಂಗ್ರೆಸ್–33
ಜೆಡಿಎಸ್–01
ಎಐಎಂಐಎಂ- 03
ಇತರರು–06
ಕಲಬುರ್ಗಿ ಪಾಲಿಕೆ: ಫಲಿತಾಂಶ ಅತಂತ್ರ
ಕಲಬುರ್ಗಿ: 55 ಸದಸ್ಯ ಬಲದ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ 27 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಬಿಜೆಪಿ 23 ಸ್ಥಾನಗಳಿಗಷ್ಟೇ ತೃಪ್ತಿ ಪಟ್ಟುಕೊಂಡಿದೆ.
ಜೆಡಿಎಸ್ 4 ಹಾಗೂ ಪಕ್ಷೇತರ ಅಭ್ಯರ್ಥಿ ಒಂದು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ನಾಲ್ಕು ಸ್ಥಾನ ಗೆದ್ದಿರುವ ಜೆಡಿಎಸ್ ಕಿಂಗ್ ಮೇಕರ್ ಆಗುವ ಸಾಧ್ಯತೆ ಇದೆ. ಜೆಡಿಎಸ್ ಬೆಂಬಲ ವಿಲ್ಲದೆ ಬಿಜೆಪಿ, ಕಾಂಗ್ರೆಸ್ ಗೆ ಅಧಿಕಾರ ಹಿಡಿಯುವುದು ಕಷ್ಟಸಾಧ್ಯ ಎನ್ನಲಾಗಿದೆ.
ಫಲಿತಾಂಶ ವಿವರ:
ಬಿಜೆಪಿ- 23
ಕಾಂಗ್ರೆಸ್ – 27
ಜೆಡಿಎಸ್ – 04
ಇತರೆ- 01