ಬೆಳಗಾವಿ: ಬೆಳಗಾವಿ ಲೋಕಸಭೆ ಕ್ಷೇತ್ರದ ಉಪಚುನಾವಣೆಯ ಜಿದ್ದಾಜಿದ್ದಿನ ಹಣಾಹಣಿಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಕೊನೆಯ ಸುತ್ತಿನ ಎಣಿಕೆಯಲ್ಲಿ ರೋಚಕ ಗೆಲುವು ದಾಖಲಿಸಿದ್ದಾರೆ.
ಮಂಗಳಾ ಅಂಗಡಿಗೆ ಭಾರಿ ಪೈಪೋಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ 5,240 ಮತಗಳಿಂದ ಪರಾಭವಗೊಂಡಿದ್ದಾರೆ.
ಆರಂಭಿಕ ಸುಮಾರು 20 ಸುತ್ತುಗಳಲ್ಲಿ ಮುನ್ನಡೆ ಸಾಧಿಸಿದ್ದ ಮಂಗಳಾ ಅಂಗಡಿ ನಂತರ ಹಿನ್ನಡೆ ಅನುಭವಿಸಿದ್ದರು. ಆದರೆ ನಂತರದ ಸುಮಾರು 35 ಸುತ್ತುಗಳಲ್ಲಿ ಸತೀಶ್ ಜಾರಕಿಹೊಳಿ ಅವರು ಸತತವಾಗಿ ಮುನ್ನಡೆ ಕಾಯ್ದುಕೊಂಡಿದ್ದರು. ಆದರೆ 80 ಸುತ್ತಿನ ನಂತರ ಮತ ಅಂತರ ಕಡಿಮೆ ಮಾಡಿಕೊಂಡ ಬಂದ ಮಂಗಳಾ ಅಂತಿಮ ಗೆಲುವಿನ ನಗೆ ಬೀರಿದ್ದಾರೆ.