ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತೆಯಾಗಿ ನ. 13ರಂದು ಅಧಿಕಾರ ವಹಿಸಿಕೊಂಡಿದ್ದ ಐಎಎಸ್ ಅಧಿಕಾರಿ ಪ್ರೀತಿ ಗೆಹ್ಲೋಟ್ ಅವರು ಹತ್ತೇ ದಿನಕ್ಕೆ ವರ್ಗಾವಣೆಗೊಂಡಿದ್ದು, ಅವರ ಸ್ಥಾನಕ್ಕೆ ಕೆಎಎಸ್ ಅಧಿಕಾರಿ ಎನ್. ಮಹೇಶಬಾಬು ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ರಾಜಸ್ಥಾನ ಮೂಲದ ಪ್ರೀತಿ ಗೆಹ್ಲೋಟ್ ಅವರು 2016ನೇ ಬ್ಯಾಚ್ ನ ಐಎಎಸ್ ಅಧಿಕಾರಿ. ತುಮಕೂರಿನಲ್ಲಿ ಪ್ರಭೇಷನರಿ ಪೂರ್ಣಗೊಳಿಸಿದ್ದ ಇವರು, ನಂತರ ಕುಮಟಾದಲ್ಲಿ ಸಹಾಯಕ ಆಯುಕ್ತರಾಗಿ ಹಾಗೂ ಉಡುಪಿಯಲ್ಲಿ ಜಿಪಂ ಸಿಇಒ ಆಗಿ ತಲಾ ಒಂದೊಂದು ವರ್ಷ ಕರ್ತವ್ಯ ನಿರ್ವಹಿಸಿದ್ದರು.