ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸವಣಾಲಿನಲ್ಲಿ ಅನಾರೋಗ್ಯ ಪೀಡಿತ ವಯೋವೃದ್ದ ಮಹಿಳೆಯೋರ್ವರನ್ನು ಹಿಂಸಿಸಿದ ಘಟನೆಗೆ ಸಂಬಂಧಿಸಿದಂತೆ ಆಕೆಯ ಮಗ ಹಾಗೂ ಮೊಮ್ಮಗನನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.
70 ವರ್ಷದ ವೃದ್ದ ಮಹಿಳೆ ಬೆಳ್ತಂಗಡಿಯ ಸವಣಾಲು ಹಲಸಿನಕಟ್ಟೆ ನಿವಾಸಿಯಾಗಿದ್ದು, ಆರೋಪಿಗಳಾದ ವೃದ್ದೆಯ ಮಗ ಶ್ರೀನಿವಾಸ ಶೆಟ್ಟಿ ಮತ್ತು ಮೊಮ್ಮಗ ಪ್ರದೀಪ್ ಶೆಟ್ಟಿ ಎಂಬವರು ಮನೆಯಲ್ಲಿ ಅಮಾನೀಯವಾಗಿ ಹಿಂಸಿಸಿದ್ದಾರೆ.
ಹಿಂಸೆ ನೀಡುವ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಹೀಗಾಗಿ ಬೆಳ್ತಂಗಡಿ ಠಾಣಾ ಪೊಲೀಸರು ಘಟಣೆಯ ಬಗ್ಗೆ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳ ವಿರುದ್ದ ಕಲಂ:323, 504 IPC & 24 senior citizen act 2007ರಂತೆ ಪ್ರಕರಣ ದಾಖಲಿಸಲಾಗಿದೆ.












