ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಕೆಲ ದಿನಗಳ ಹಿಂದೆ ಹರೀಶ್ ಪೂಂಜಾ ಅವರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ಭೇಟಿಯಾದ ಒಂದೆರಡು ದಿನದಲ್ಲೇ ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್ ಆಗಿರುವುದು ತಿಳಿದ ತಕ್ಷಣ ಹರೀಶ್ ಪೂಂಜಾ ಅವರು ಮಂಗಳೂರಿನಲ್ಲಿ ಕ್ವಾರಂಟೈನ್ ಗೆ ಒಳಗಾಗಿದ್ದರು. ಇದೀಗ ಪಾಸಿಟಿವ್ ದೃಢಪಟ್ಟಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.