ಬೆಳ್ತಂಗಡಿ: ಶ್ರೀಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯ ಬುಲ್ ಬುಲ್ ವಿದ್ಯಾರ್ಥಿಗಳಿಗೆ ರಾಜ್ಯ ಪುರಸ್ಕಾರ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೆಂಗಳೂರು ರಾಜ್ಯ ಸಂಸ್ಥೆ ಆಯೋಜಿಸಿದ ಹೀರೆಕ್ ಗರಿ ರಾಜ್ಯ ಪುರಸ್ಕಾರ ಪರೀಕ್ಷೆ ಬರೆದು ಉತ್ತೀರ್ಣರಾದ ಬೆಳ್ತಂಗಡಿ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯ 11 ಬುಲ್ ಬುಲ್ ವಿದ್ಯಾರ್ಥಿಗಳು ರಾಜ್ಯ ಪುರಸ್ಕಾರವನ್ನು ಪಡೆದಿದ್ದಾರೆ.

ಇವರಿಗೆ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ, ಧರ್ಮಸ್ಥಳ ಆಂಗ್ಲಮಾಧ್ಯಮ ಶಾಲೆಯ ಕ್ಯಾಪ್ಟನ್ ಪ್ರಮೀಳಾ ಅವರು ತರಬೇತಿಯನ್ನು ನೀಡಿರುತ್ತಾರೆ. ಮುಖ್ಯ ಶಿಕ್ಷಕಿ ಹೇಮಲತಾ ಎಂ.ಆರ್. ಸಹಕಾರ ನೀಡಿರುತ್ತಾರೆ.