ಬೆಳ್ತಂಗಡಿ: ಮರ ಕಡಿಯುತ್ತಿರುವ ಸಂದರ್ಭದಲ್ಲಿ ಮರದಡಿ ಸಿಲುಕಿ ಮೂವರು ಯುವಕರು ದಾರುಣವಾಗಿ ಮೃತಪಟ್ಟ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಪಟ್ರಮೆ ಗ್ರಾಮದ ಅನಾರು ಬಳಿ ಇಂದು ಮಧ್ಯಾಹ್ನ ನಡೆದಿದೆ.
ಮೃತರನ್ನು ಪಟ್ರಮೆ ರಾಮಣ್ಣ ಕುಂಬಾರ ಅವರ ಪುತ್ರ ಪ್ರಶಾಂತ್ (21), ಸೇಸಪ್ಪ ಪೂಜಾರಿ ಅವರ ಪುತ್ರ ಸ್ವಸ್ತಿಕ್ (23) ಹಾಗೂ ಮತ್ತೋರ್ವ ಉಪ್ಪಿನಂಗಡಿ ನಿವಾಸಿ ಸುರೇಶ್ ಎಂದು ಗುರುತಿಸಲಾಗಿದೆ. ಅನಾರು ಕಾಯಿಲ ಲೋಕಯ್ಯ ಗೌಡರಿಗೆ ಸೇರಿದ ಸ್ಥಳದಲ್ಲಿದ್ದ ಧೂಪದ ಮರವನ್ನು ಕಡಿದು ಉರುಳಿಸುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಧರ್ಮಸ್ಥಳ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.












