ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಂಗಳವಾರದಿಂದ ಒಂದು ವಾರಗಳ ಕಾಲ ಲಾಕ್ ಡೌನ್ ಮಾಡಲು ಸರ್ಕಾರ ತೀರ್ಮಾನಿಸಿದೆ.
ಮಂಗಳವಾರ ರಾತ್ರಿ 8 ಗಂಟೆಯಿಂದ ಲಾಕ್ ಡೌನ್ ಜಾರಿಯಾಗಲಿದೆ ಎಂದು ಸರ್ಕಾರದಿಂದ ಅಧಿಕೃತ ಘೋಷಣೆ ಹೊರಬಿದ್ದಿದೆ.
ರಾಜ್ಯದಲ್ಲಿ ದಿನೇ ದಿನೇ ಭಾರಿ ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಮೇರೆಗೆ ಜು.14 ಮಂಗಳವಾರ ರಾತ್ರಿ 8.00 ಗಂಟೆಯಿಂದ ಜು.23 ರ ಬೆಳಿಗ್ಗೆ 5.00 ಗಂಟೆಯವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲಾಗುವುದು.
ಈ ಅವಧಿಯಲ್ಲಿ ಎಂದಿನಂತೆ ಆಸ್ಪತ್ರೆಗಳು, ದಿನಸಿ, ಹಾಲು, ಹಣ್ಣು, ತರಕಾರಿ, ಔಷದಿ ಮೊದಲಾದ ದಿನಬಳಕೆಯ ಅಗತ್ಯ ವಸ್ತುಗಳು ಲಭ್ಯವಿರುತ್ತವೆ. ಇದರ ಜೊತೆ ಈಗಾಗಲೇ ನಿಗದಿಯಾಗಿರುವ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳು ನಡೆಯಲಿವೆ.
ದಿನಬಳಕೆ ವಸ್ತುಗಳ ಖರೀದಿಗೆ ತೆರಳುವಾಗ ಸಾಮಾಜಿಕ ಅಂತರ ಪಾಲಿಸಿ, ಮಾಸ್ಕ್ ಧರಿಸಿ, ಸರ್ಕಾರ ಹೊರಡಿಸುವ ಲಾಕ್ ಡೌನ್ ಸಂಬಂಧಿತ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸಿ ಸಹಕರಿಸಿ. ತಾವು ಲಾಕ್ಡೌನ್ ಸಂಧರ್ಬದಲ್ಲಿ ಮನೆಯಲ್ಲೇ ಇರುವ ಮೂಲಕ ಕೋವಿಡ್-19ರ ನಿಯಂತ್ರಣಕ್ಕೆ ಕೈ ಜೋಡಿಸಿಸುವಂತೆ ಸೂಚಿಸಿದೆ.