ಕಾಪು ಶಾಸಕ ಲಾಲಾಜಿ ಮೆಂಡನ್ ಸಹಿತ ನಾಲ್ಕು ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿ ಹಿಂಪಡೆದ ಸಿಎಂ

ಬೆಂಗಳೂರು: ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಸಹಿತ ನಾಲ್ಕು ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಿಂಪಡೆಯಲು ಸೂಚಿಸಿದ್ದಾರೆ.
ಡಿ.ದೇವರಾಜ ಅರಸ್ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಜಿ.ಎಚ್.ತಿಪ್ಪಾರೆಡ್ಡಿ, ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಪರಣ್ಣ ಈಶ್ವರಪ್ಪ ಮುನವಳ್ಳಿ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಲಾಲಾಜಿ ಆರ್.ಮೆಂಡನ್ ಮತ್ತು ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಬಸವರಾಜ್ ದಢೇಸೂರ್ ಅವರ ನೇಮಕವನ್ನು ಮುಖ್ಯಮಂತ್ರಿ ಹಿಂಪಡೆದಿದ್ದಾರೆ.
ರಾಜ್ಯದ ವಿವಿಧ ನಿಗಮ ಮಂಡಳಿಗಳಿಗೆ 24 ಶಾಸಕರುಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿತ್ತು. ಆದರೆ ಆದೇಶ ಹೊರಡಿಸಿದ 24 ಗಂಟೆಯೊಳಗೆ ನಾಲ್ಕು ಮಂದಿಯ ನೇಮಕಾತಿಯನ್ನು ಹಿಂಪಡೆದಿದ್ದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.