udupixpress
Home Trending ಬೆಂಗಳೂರು: ಭೀಕರವಾಗುತ್ತಲೇ ಇದೆ ಕೊರೊನಾ ಅಟ್ಟಹಾಸ..  

ಬೆಂಗಳೂರು: ಭೀಕರವಾಗುತ್ತಲೇ ಇದೆ ಕೊರೊನಾ ಅಟ್ಟಹಾಸ..  

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಶನಿವಾರ ಒಂದೇ ದಿನ 918 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದೆ. ಇದು ದಿನವೊಂದರಲ್ಲಿ ವರದಿಯಾದ ಗರಿಷ್ಠ ಸಂಖ್ಯೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11,923ಕ್ಕೆ ಏರಿಕೆಯಾಗಿದೆ.
ಹಾಗೂ ಬೆಂಗಳೂರಿನಲ್ಲಿ ಸೋಂಕು ಪ್ರಮಾಣ ಹೆಚ್ಚು ಕಾಣಿಸಿಕೊಂಡಿದ್ದು, ಇಂದು ಒಂದೇ ದಿನ 596 ಪ್ರಕರಣಗಳು ವರದಿಯಾಗಿವೆ. ಇದೂ ಕೂಡ ಒಂದೇ ದಿನದಲ್ಲಿ ವರದಿಯಾದ ಗರಿಷ್ಠ ಸಂಖ್ಯೆಯಾಗಿದೆ.
ರಾಜ್ಯದಲ್ಲಿ ಇಂದು 11 ಮಂದಿ ಕೊರೊನಾ ವೈರಸ್‌ಗೆ ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಒಟ್ಟು 191  ಮಂದಿ ಸೋಂಕಿಗೆ ಬಲಿಯಾದಂತಾಗಿದೆ.