ಬೆಂಗಳೂರು: ಬೆಂಗಳೂರಿನಲ್ಲಿ ಶಂಕಿತ ಐಸಿಸಿ ಉಗ್ರನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಯ ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನೇತ್ರ ತಜ್ಞನಾಗಿ ಕಾರ್ಯನಿರ್ವಹಿಸುತ್ತಿದ್ದ ಅಬ್ದುರ್ ರೆಹಮಾನ್ ಬಂಧಿತ. ಈತ ಬೆಂಗಳೂರಿನ ನಿವಾಸಿಯಾಗಿದ್ದು, ದಾಳಿ ವೇಳೆ ಫೋನ್, ಲ್ಯಾಪ್ ಟಾಪ್ ಹಾಗೂ ಡಿಜಿಟಲ್ ಡಿವೈಸ್ ಗಳನ್ನ ಎನ್ಐಎ ವಶಪಡಿಸಿಕೊಂಡಿದೆ.
ಸ್ಪೋಟಕ ಮಾಹಿತಿ ಲಭ್ಯ:
ಬಂಧಿತ ಅಬ್ದುರ್ ರೆಹಮಾನ್ ವಿಚಾರಣೆ ವೇಳೆ ಹಲವು ವಿಷಯಳನ್ನು ಬಾಯಿ ಬಿಟ್ಟಿದ್ದಾನೆ. ಐಸಿಸ್ ನಂಟಿರುವ ಬಗ್ಗೆ ರೆಹಮಾನ್ ಒಪ್ಪಿಕೊಂಡಿದ್ದು, ಸ್ಥಳೀಯ ಐಸಿಸ್ ಉಗ್ರರಿಗೆ ವೈದ್ಯಕೀಯ ವಿಚಾರದಲ್ಲಿ ನೆರವಾಗಿರುವ ಬಗ್ಗೆ ಮಾಹಿತಿ ನೀಡಿದ್ದಾನೆ. ಅಲ್ಲದೇ ಈ ಹಿಂದೆ ಸಿರಿಯಾಕ್ಕೆ ಭೇಟಿ ನೀಡಿದ್ದು, ಐಸಿಸ್ ಉಗ್ರರಿಗೆ ಚಿಕಿತ್ಸೆ ನೀಡಿದ್ದೇನೆ. ಅಲ್ಲದೆ 10 ದಿನಗಳ ಕಾಲ ಸಿರಿಯಾದಲ್ಲಿದ್ದೆ ಎಂದು ಸ್ಪೋಟಕ ಮಾಹಿತಿ ನೀಡಿದ್ದಾನೆ.