ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ನಿನ್ನೆ ರಾತ್ರಿ ನಡೆದ ಗಲಭೆಗೆ ಸಂಬಂಧಿಸಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಿ ನವೀನ್( ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ತಂಗಿ ಮಗ)ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ತಿಳಿಸಿದ್ದಾರೆ.
ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಹಚ್ಚಿದ, ಕಲ್ಲು ತೂರಾಟ ನಡೆಸಿದ ಹಾಗೂ ಪೊಲೀಸರ ಮೇಲೆ ಹಲ್ಲೆ ನಡೆಸಿದ 110 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ‘ಮೊಹಮ್ಮದ್ ಪೈಗಂಬರ್ ಅವರ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸಲಾಗಿದೆ’ ಎಂದು ಆರೋಪಿಸಿ 500ಕ್ಕೂ ಹೆಚ್ಚು ಜನರು ಗಲಭೆ ನಡೆಸಿದ್ದರು.












