ಎಸ್ಸೆಸ್ಸೆಲ್ಸಿ ಪಾಸಾದವರಿಗೆ ರೈಲ್ವೇ ಉದ್ಯೋಗವಕಾಶ: 2792 ಅರ್ಜಿ ಆಹ್ವಾನ

ಬೆಂಗಳೂರು: ಪೂರ್ವ ರೈಲ್ವೆ 2792 ಅಕ್ಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
2020ರ ಫೆ. 14ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ದಿನಾಂಕ ಮಾರ್ಚ್ 13 ರ ಒಳಗೆ ಅರ್ಜಿ ಸಲ್ಲಿಸಬೇಕು.
ವಿದ್ಯಾರ್ಹತೆ: ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್‌ನಿಂದ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ 10+2 ತತ್ಸಮಾನವನ್ನು ಶೇ. 50ರಷ್ಟು ಅಂಕಗಳೊಂದಿಗೆ ತೇರ್ಗಡೆಗೊಂಡಿರಬೇಕು. 15ರಿಂದ 24 ವಯೋಮಿತಿಯವರು ಅರ್ಜಿ ಸಲ್ಲಿಸಬಹುದು. ಸಾಮಾನ್ಯ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕವಿದ್ದು, ಪ.ಜಾ.-ಪಂ. ಕ್ಕೆ
ಯಾವುದೇ ಶುಲ್ಕವಿಲ್ಲ. ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.