ಅಪಾಯಕಾರಿಯಾಗಿದೆ ಬೆಂಗಳೂರಿನ ಏರ್ ಕ್ವಾಲಿಟಿ; ಇಲ್ಲಿದೆ ಉಡುಪಿ, ಮಂಗಳೂರು ವಾಯು ಗುಣಮಟ್ಟದ ಡೀಟೈಲ್ಸ್

ಬೆಂಗಳೂರು, ಏಪ್ರಿಲ್ 06: ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ವಾಯು ಗುಣಮಟ್ಟದಲ್ಲಿ ಏರಿಳಿತ ಕಂಡು ಬರುತ್ತಿದೆ. ಇಂದಿನ ಸ್ಥಿತಿಯಲ್ಲಿ ಬೆಳಗಾವಿ ಬೆಂಗಳೂರು ಸೇರಿದಂತೆ ಕೆಲವು ಕಡೆಗಳಲ್ಲಿ ಏರ್ ಕ್ವಾಲಿಟಿಯಲ್ಲಿ ಸ್ವಲ್ಪ ಮಟ್ಟಿನ ಸುಧಾರಣೆ ಕಂಡುಬಂದಿದೆ. ಆದರೆ, ಬೆಂಗಳೂರಿನ ವಾಯು ಗುಣಮಟ್ಟ ಇನ್ನೂ ಅಪಾಯಕಾರಿ ಮಟ್ಟದಲ್ಲಿಯೇ ಉಳಿದಿದ್ದು, ಇದರಿಂದ ಶ್ವಾಸಕೋಶ ಸಂಬಂಧಿತ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಕೆಲ ದಿನಗಳ ಹಿಂದೆ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ AQI ಇಂದು 97ಕ್ಕೆ ತಲುಪಿದ್ದು, ಹಿಂದಿನ ದಿನಗಳಿಗಿಂತ ಸ್ವಲ್ಪ ಮಟ್ಟಿನ ಸುಧಾರಣೆ ಕಂಡುಬಂದಿದೆ.

ಇನ್ನೂ ಉಡುಪಿ, ಮಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ವಾಯು ಗುಣಮಟ್ಟ ಉತ್ತಮವಾಗುತ್ತಿರುವ ಲಕ್ಷಣಗಳು ಗೋಚರಿಸುತ್ತಿವೆ. ಆದಾಗ್ಯೂ, World Health Organization (WHO) ಮಾನದಂಡಗಳ ಪ್ರಕಾರ ಇಂತಹ ವಾಯು ಗುಣಮಟ್ಟ ಇನ್ನೂ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ. ಒಟ್ಟಿನಲ್ಲಿ, ಅಂಕಿ ಅಂಶಗಳಲ್ಲಿ ಸ್ವಲ್ಪ ಮಟ್ಟಿನ ಸುಧಾರಣೆ ಕಂಡುಬಂದರೂ, ರಾಜ್ಯದ ವಾಯು ಗುಣಮಟ್ಟ ಇನ್ನೂ ಸಂಪೂರ್ಣ ಸುರಕ್ಷಿತ ಮಟ್ಟಕ್ಕೆ ತಲುಪಿಲ್ಲ ಎಂಬುದು ತಜ್ಞರ ಅಭಿಪ್ರಾಯವಾಗಿದೆ.

  • ಬೆಳಗಾವಿ – 130
  • ಹುಬ್ಬಳ್ಳಿ- 112
  • ಮೈಸೂರು –100
  • ಬೆಂಗಳೂರು – 97
  • ಶಿವಮೊಗ್ಗ – 94
  • ಬಳ್ಳಾರಿ – 91
  • ಕಲಬುರ್ಗಿ-88
  • ಮಂಗಳೂರು-87
  • ಉಡುಪಿ –85
  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+