ಮಂಗಳೂರು: ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನ ಭಾರ್ಗವಿ ಎನ್ನುವ ಬಾಲಕಿ ಸೋಮವಾರ ಮುಂಜಾನೆ 3 ಗಂಟೆಗೆ ಮಂಗಳೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಬಂದು ಅಲ್ಲಿಂದ ನಾಪತ್ತೆಯಾಗಿದ್ದ ಘಟನೆ ವರದಿಯಾಗಿತ್ತು. ಈ ಬಗ್ಗೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ತಮ್ಮ ಫೇಸ್ಬುಕ್ ವಾಲ್ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಾಪತ್ತೆಯಾದ ಹುಡುಗಿ ಪತ್ತೆಯಾಗಿದ್ದಾಳೆ ಎಂದು ಹೇಳಿದ್ದಾರೆ. ಇದಕ್ಕಾಗಿ ಅವರು ಜನರಿಗೆ ಧನ್ಯವಾದ ಅರ್ಪಿಸಿದ್ದಾರೆ ಮತ್ತು 14 ವರ್ಷದ ಭಾರ್ಗವಿ ಗೋವಾದಲ್ಲಿ ಪತ್ತೆಯಾಗಿದ್ದು, ಪಣಜಿ ಪೊಲೀಸ್ ಠಾಣೆಯಲ್ಲಿದ್ದಾಳೆ ಎಂದು ಸಮಾಧಾನ ವ್ಯಕ್ತಪಡಿಸಿದ್ದಾರೆ.
ಆ ಅಪಸಮಯದಲ್ಲಿ ಯಾವುದೇ ಬಾಲಕ ಅಥವಾ ಬಾಲಕಿ ಮನೆಯಿಂದ ಹೊರಗೆ ಯಾವುದೇ ಪೋಷಕರಿಲ್ಲದೆ ಸುತ್ತಡಲು ಕಾರಣಗಳೇನು ಅನ್ನುವುದನ್ನು ವಿಚಾರಣೆ ಮಾಡಬೇಕು ಮತ್ತು ಇಂತಹ ಘಟನೆಗಳು ಕಂಡುಬಂದಾಗ ಸಮಾಜವು ಸಾಮಾಜಿಕ ಜವಾಬ್ದಾರಿ ನಿಭಾಯಿಸಬೇಕು ಎಂದು ಅವರು ಹೇಳಿದ್ದಾರೆ.
ಇಂತಹ ಘಟನೆಗಳು ಕಂಡು ಬಂದಲ್ಲಿ 112 ಗೆ ಕರೆ ಮಾಡುವಂತೆ ಅವರು ಮನವಿ ಮಾಡಿದ್ದಾರೆ.